ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯನವರು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.

Also Read  ಮುಸ್ಲಿಮರ 2b ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

 

 

error: Content is protected !!
Scroll to Top