ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದಲ್ಲಿ ಹಿಂಸಾಚಾರ    14 ಪೊಲೀಸರು ಸೇರಿದಂತೆ 100 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಢಾಕಾ, ಆ.05. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ.

ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಇನ್ನು 100 ಮಂದಿ ಸಾವನ್ನಪ್ಪುವ ಜೊತೆಗೆ ನಾರಾರು ಮಂದಿ ಗಾಯಗೊಂಡಿದ್ದಾರೆ. ಭಾರತೀಯರು ಮನೆಯಿಂದ ಆಚೆ ಬಾರದಂತೆ ಹಾಗೂ ಬಾಂಗ್ಲಾದಲ್ಲಿರುವ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ ಕಚೇರಿ ಈಗಾಗಲೇ ಸೂಚನೆ ನೀಡಿದೆ.

Also Read  ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

 

 

error: Content is protected !!
Scroll to Top