ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                         

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿಯಲ್ಲಿ ವರದಿಯಾಗಿದೆ.

ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಬಸ್ ಅನ್ನು ಹತ್ತಿರದ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ್ಕೆ ಚಾಲಕ ಹಾಗೂ ನಿರ್ವಾಹಕ ಕೊಂಡೊಯ್ದಿದ್ದಾರೆ. ಇದೀಗ ಬಸ್ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ.

Also Read  ಜ. 10ರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ➤ ಸಚಿವ ಸುಧಾಕರ್

 

 

error: Content is protected !!
Scroll to Top