‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ            

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.05. ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು ಎನ್ನಲಾಗಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also Read  ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ASI..!!   ➤ ASI ಅಮಾನತು

 

error: Content is protected !!
Scroll to Top