ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ          

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ ಒಟ್ಟು 37 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಆರೋಪಿಯನ್ನು, ಕೋಟ ನಿವಾಸಿ ಸಚಿನ್ ಪೂಜಾರಿ (26)ಎಂದು ಗುರುತಿಸಲಾಗಿದೆ.

42 ಸಾಕ್ಷಿಗಳ ಪೈಕಿ 24 ಮಂದಿಯನ್ನು ವಿಚಾರಣೆಗೊಳಪಡಿಸಿ, 50 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಶಪಡಿಸಿಕೊಂಡ ಆಭರಣ ಸೇರಿದಂತೆ ಸಂತ್ರಸ್ತೆಯ ಸಾಕ್ಷ್ಯ ಮತ್ತು ಇತರ ದೃಢೀಕರಿಸುವ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ತಪ್ಪಿತಸ್ಥರೆಂದು ಘೋಷಿಸಿತು. ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಘೋಷಿಸಿದರು ಎನ್ನಲಾಗಿದೆ.

Also Read  ಪಡುಬಿದ್ರಿ: ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆ ► ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

 

 

error: Content is protected !!
Scroll to Top