ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.05. ದೇವಸ್ಥಾನದ ಅರ್ಚಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಚೆನ್ನೈತ್ತೋಡಿ ಗ್ರಾಮದ ದೊಡ್ಡದಳಿಕೆ ನಿವಾಸಿ ಹರೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ.

ಕೇಶವ ಪೂಜಾರಿ ಅವರು ಹರೀಶ್ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಹರೀಶ್ ಮೇ 30 ರಂದು ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ವಾಪಸ್ ಬಂದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

 

Scroll to Top