‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ವಿರೋಧ; ಕಪ್ಪು ಪಟ್ಟಿ ಪ್ರದರ್ಶನ       50ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ               

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು.

ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ, ಪ್ರಭುಲಿಂಗ ಮಹಾಗಾಂವಕರ, ಸುನಿಲ್ ಮಾನ್ಪಡೆ ಸೇರಿದಂತೆ ಹಲವರನ್ನು ತಡೆದ ಪೊಲೀಸರು, ವಶಕ್ಕೆ ಪಡೆದರು. ಸಂಘ ಪರಿವಾರ ಪ್ರೇರಿತ ವಿಶ್ವ ಗುರು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ, ಶರಣ ಚಳುವಳಿಯ ನಿಜ ತಿರುಚಿ ಅವರ ತತ್ವ ,ಚಿಂತನೆ ಚಳುವಳಿ, ಅಯೋಧ್ಯೆ ಪ್ರಕಾಶಿತ ಆರ್‍ಎಸ್‍ಎಸ್ ಪ್ರಕಟಿತ ವಚನ ದರ್ಶನ, ಕೃತಿ ವಿರೋಧಿಸಿ ಕಪ್ಪು ಬಟ್ಟೆ ಪ್ರದರ್ಶಿಸಿ, ಪ್ರತಿಭಟನೆ ಮಾಡಿದರು.

Also Read  ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ➤ ಜೂ.23ಕ್ಕೆ ಮಹಾಸಂಚಿಕೆ

 

error: Content is protected !!
Scroll to Top