ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com. ಕಡಬ, ಆ. 05. ಪಕ್ಷಕ್ಕೆ ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್, ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಾವಣಿ ಹಾಗೂ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ.

ಅದರಂತೆ ಈ ಬಾರೀ ಸುಳ್ಯ ಕ್ಷೇತ್ರದಿಂದ ಪ್ರಬಲ ಪೈಪೋಟಿಯಾಗಿ ಶಿಹಾಬುದ್ದೀನ್ ರವರು ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆ. 03ರಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಸಿಯಾಬುದ್ದೀನ್ ಅವರು ಪಕ್ಷದ ನಾಯಕರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದು ಸುಂಕದಕಟ್ಟೆ ಬೂತ್ ಅಧ್ಯಕ್ಷರಾಗಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವುದು ಹಾಗೂ ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಾರೆ. ಇಲ್ಲಿಯವರೆಗೆ ಪಕ್ಷದಲ್ಲಿ ಯಾವುದೇ ಅಧಿಕಾರ ಅಥವಾ ಹುದ್ದೆಗೆ ಆಸೆಪಟ್ಟಿರುವುದಿಲ್ಲ. ಸಕ್ರಿಯವಾಗಿ ಪಕ್ಷದ ಕೆಲಸವನ್ನು ನಿಭಾಯಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸೂಕ್ತ ಅಭ್ಯರ್ಥಿಯಾಗಿದ್ದು, ಅವರನ್ನು ಆಯ್ಕೆ‌ ಮಾಡುವ ಮೂಲಕ‌ ಕಡಬ ಬ್ಲಾಕ್ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬರಲಿದೆ ಎಂದು ಆಪ್ತ ವರ್ಗ ಹೇಳಿದೆ.

Also Read  ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ

error: Content is protected !!
Scroll to Top