ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ.

Also Read  ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್

 

 

error: Content is protected !!
Scroll to Top