ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                     

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ನಿರ್ಣಾಯಕ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಸ್ತಾವನೆ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಅವರು ವೀಕ್ಷಿಸಿದರು.

Also Read  ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

 

error: Content is protected !!
Scroll to Top