ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಆ.06. ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ.

ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

 

 

error: Content is protected !!
Scroll to Top