(ನ್ಯೂಸ್ ಕಡಬ)newskadaba.com ಚಿತ್ರದುರ್ಗ,ಆ.06. ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಹಣ ನೀಡುವ ತನಕ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲವಾಗುತ್ತಿದೆ. ಪೊಲೀಸರಿಗೇ ರಕ್ಷಣೆ ಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.