ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ: ಕೆಮ್ಮಾರ ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ,ಆ.06. ಮಠ (ಪುಳಿತ್ತಡಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಬಾಲಕ/ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟದಲ್ಲಿ ಕೆಮ್ಮಾರ ಸರಕಾರಿ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಉಪ್ಪಿನಂಗಡಿ ವಲಯ ಮಟ್ಟದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಪಂದ್ಯಾಕೂಟದಲ್ಲಿ ಪಾಲ್ಗೊಂಡಿದ್ದರು.


ಪಂದ್ಯಾಕೂಟದುದ್ದಕ್ಕೂ ಉತ್ತಮ ಪ್ರದರ್ಶನ ತೋರಿದ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ವಿದ್ಯಾರ್ಥಿನಿಯರಾದ ಜಮೀಲತ್ ನೌಶೀನ, ಜೈನಬ ವಫಿಯ್ಯ, ಜೈನಬ ವಸೀಯ್ಯ ರವರಿಗೆ ಅರ್ಹವಾಗಿಯೇ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡರು. ಈ ಸಂದರ್ಭದಲ್ಲಿ ಕೆಮ್ಮಾರ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ, ಮಠ (ಪುಳಿತ್ತಡಿ) ಸರಕಾರಿ ಶಾಲೆಯ ಮುಖ್ಯ ಗುರುಗಳು ಮತ್ತು ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷರಾದ ಝಕರಿಯಾ, ಅಧ್ಯಾಪಕ ವೃಂದದವರು, ದೈಹಿಕ ಶಿಕ್ಷಣ ಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Also Read  ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ, ಅಂಗಡಿ ಮುಂಗಟ್ಟು ಬಂದ್ ➤ ವಾಹನ ಸಂಚಾರವೂ ವಿರಳ

error: Content is protected !!
Scroll to Top