ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.06.  ಆಟೋ ಚಾಲಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೃತಪಟ್ಟವರನ್ನು ಮಹಮ್ಮದ್(48) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ ಎಂದು ವರದಿ ತಿಳಿಸಿದೆ.

Scroll to Top