(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.
