ದ.ಕ. ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಸಂಚರಿಸಲು ಅನುಮತಿ  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.

Also Read  ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

error: Content is protected !!
Scroll to Top