(ನ್ಯೂಸ್ ಕಡಬ)newskadaba.com ಬೆಂಗಳೂರು , ಆ.07. ತಮಿಳಿನ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ, ಸಿನಿಮಾದ ಕ್ಯಾಸ್ಟಿಂಗ್ ನಿರ್ದೇಶಕನ ಸೋಗಿನಲ್ಲಿ ಸ್ಯಾಂಡಲ್‌ವುಡ್ ನಟಿಯೊಬ್ಬರಿಗೆ ಸೈಬರ್ ವಂಚಕರು 1.7 ಲಕ್ಷ ರೂ. ವಂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಸ್ಯಾಂಡಲ್‌ವುಡ್ ನಟಿ ನಂದಿತ ಕೆ.ಶೆಟ್ಟಿ (21) ವಂಚನೆಗೊಳಗಾದವರು ಎನ್ನಲಾಗಿದೆ. ಈ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ವಂಚಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.