ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ        ಆರೋಪಿ ಅರೆಸ್ಟ್     

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08.  14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕತ್ತು ಹಿಸುಕಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಬಾಲಕಿಯ ಚಿಕ್ಕಪ್ಪ ರವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2024 ಕಲಂ 103 (1) ಬಿ.ಎನ್.ಎಸ್.ಯಂತೆ ಪ್ರಕರಣ ದಾಖಲಾಗಿರುತ್ತದೆ ಎನ್ನಲಾಗಿದೆ.


ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ ಹಂಚಿನಾಳ್, ಪರಸಗಡದ ಮಾದರ ಓಣಿಯವರಾಗಿದ್ದು, ಪ್ರಸ್ತುತ ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ, ತನಿಖೆ ನಡೆಯುತ್ತಿದೆ. ಆರೋಪಿಗಳು ಕಳೆದ ಆರು ತಿಂಗಳಿನಿಂದ ಜೋಕಟ್ಟೆ ಪ್ರದೇಶದಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು.

Also Read  ಆತೂರು: ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಉಪ್ಪಿನಂಗಡಿ ವಲಯದ ಫ್ರೀಡಂ ಸ್ಕ್ವಾರ್ ವತಿಯಿಂದ ➤73ನೇ ಸ್ವಾತಂತ್ರ್ಯೋತ್ಸವ ಆಚರಣೆ

ದೂರುದಾರರಿಗೆ ಫಕೀರಪ್ಪ ಪರಿಚಯವಿದ್ದು, ಅವರ ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಆಗಸ್ಟ್ 6 ರಂದು ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದಾಗ ಧಿಕ್ಕರಿಸಿದ ಫಕೀರಪ್ಪ ಆಕೆಯನ್ನು ಕೊಲೆ ಮಾಡಿದ್ದಾನೆ.

 

error: Content is protected !!
Scroll to Top