‘ಹಳೆಯ ಚಾಳಿಯನ್ನು ಇನ್ನೂ ಬಿಟ್ಟಿಲ್ಲ’             ಡಿಕೆಶಿ ವಿರುದ್ಧ ಹೆಚ್‌ಡಿಕೆ ಟಾಂಗ್‌          



(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08.   ತಮ್ಮ ಬಗ್ಗೆ ವೀಡಿಯೋ ಪ್ಲೇ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರು ತಮ್ಮ ಹಳೆಯ ಚಾಳಿ ಬಿಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.





ಮೈಸೂರು ಚಲೋ ಐದನೇ ದಿನದ ಪಾದಯಾತ್ರೆ ವೇಳೆ ಮಂಡ್ಯದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನನಗೆ ಬಹಳಷ್ಟು ಜನರು ಕೊಚ್ಚೆಗಳ ಬಗ್ಗೆ ಮಾತಾಡಬಾರದು ಎಂದು ಸಲಹೆ ಕೊಟ್ಟಿದ್ದಾರೆ. ನಾನು ಮಾತನಾಡಬಾರದು ಎಂದು ಕೊಂಡಿದ್ದೆ. ಮಂಡ್ಯದಲ್ಲಿ ಅವರು ಒಂದು ವೀಡಿಯೋ ಪ್ಲೇ ಮಾಡಿದ್ದಾರೆ. ಇದೇ ಕಾರಣಕ್ಕೆ ನಾನು ಆ ವ್ಯಕ್ತಿಯನ್ನು ಸಿಡಿ ಶಿವು ಎಂದು ಕರೆದಿದ್ದೆ. ಅವರ ಡಿವಿಡಿ ತೋರಿಸುವ ಚಾಳಿ ಎಲ್ಲಿ ಹೋಗುತ್ತದೆ ಹೇಳಿ . ಅವರು ಇನ್ನೂ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಎಂದು ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದರು ಎನ್ನಲಾಗಿದೆ.






error: Content is protected !!
Scroll to Top