‘ಕುಸ್ತಿ ನನ್ನ ವಿರುದ್ದ ಗೆದ್ದಿದೆ’            ಕುಸ್ತಿಪಟು ವಿನೇಶ್ ಫೋಗಟ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಆ.08. ಪ್ಯಾರಿಸ್ ಒಲಿಂಪಿಕ್ಸ್‌ ನ ಕುಸ್ತಿ ಫೈನಲ್‌ ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಫೈನಲ್‌ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ಭಾರತದ ಹೆಮ್ಮೆಯ ಪುತ್ರಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿತ್ತು.

ವಿನೇಶ್ ಫೋಗಟ್ ಟ್ವೀಟ್ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದಾರೆ, “ಕುಸ್ತಿ ನನ್ನ ವಿರುದ್ದ ಗೆದ್ದಿದೆ. ನಾನು ಸೋತಿದ್ದೇನೆ. ನಿಮ್ಮ ಕನಸು ಹಾಗೂ ನನ್ನ ಧೈರ್ಯ ಎಲ್ಲವೂ ನುಚ್ಚುನೂರಾಯಿತು ಈಗ ನನಗೆ ಇದಕ್ಕಿಂತ ಹೆಚ್ಚಿನ ಶಕ್ತಿ ಇಲ್ಲ. 2021-2024 ಕುಸ್ತಿಗೆ ವಿದಾಯ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ” ಎಂದು ಪೋಸ್ಟ್ ಹಾಕಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು - ದೆಹಲಿ ನಡುವೆ ವಿಮಾನ ಸೇವೆ ಆರಂಭ

 

error: Content is protected !!
Scroll to Top