ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು              

(ನ್ಯೂಸ್ ಕಡಬ)newskadaba.com ಕೋಲಾರ, ಆ.08. ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಮತ್ತು ವರನ ಸ್ಥಿತಿ ಗಂಭೀರವಾಗಿದೆ.

27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು

 

 

error: Content is protected !!
Scroll to Top