ಕೊನೆಗೂ ಕರಾವಳಿಯ ಜಾನಪದ ಕ್ರೀಡೆ ಕಂಬಳ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ► ವಿಧೇಯಕ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.19. ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಷ್ಟ್ರಪತಿಗಳು ಹಸಿರು ನಿಶಾನೆ ನೀಡಿದ್ದು, ಕಂಬಳದ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ದೊರೆತಿದೆ.

ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು ಆರೋಪಿಸಿ ಪೇಟಾ ಸುಪ್ರೀಂ ಕೋರ್ಟ್ ಮೇಟ್ಟಿಲೇರಿ ತಡೆಯಾಜ್ಞೆ ತಂದಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸುಗ್ರೀವಾಜ್ಞೆ ಹೊರಡಿಸಿ ಮಸೂದೆಗೆ ತಿದ್ದುಪಡಿ ತಂದು ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದಿತ್ತು. ಬಳಿಕ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿ, ರಾಜ್ಯಪಾಲ ವಜುಭಾಯಿ ವಾಲಾ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ವಿಧೇಯಕ ತಿದ್ದುಪಡಿ ಆದ ಏಳು ತಿಂಗಳ ನಂತರ ರಾಷ್ಟ್ರಪತಿಯವರು ರಾಜ್ಯ ಸರ್ಕಾರ ಮಂಡಿಸಿದ್ದ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ್ದು, ತುಳುನಾಡಿನ ಜನಪದ ಕ್ರೀಡೆ ಕಂಬಳ ಅಭಿಮಾನಿಗಳಲ್ಲಿ ಹರ್ಷವನ್ನುಂಟುಮಾಡಿದೆ.

Also Read  ಈ ಸಣ್ಣ ಕೆಲಸ ಮಾಡಿದರೆ ಗಂಡ ಹೆಂಡತಿ ಜಗಳ ಮತ್ತು ಶತ್ರುಗಳ ಕಾಟ ನಿವಾರಣೆ ಆಗುವುದು

ಈ ಮಧ್ಯೆ ಬಿಜೆಪಿ ಮುಖಂಡ, ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಕಂಬಳದ ಉಳಿವಿಗಾಗಿ ಕಾನೂನು ಹೋರಾಟವನ್ನೂ ಕೈಗೊಳ್ಳಲಾಗಿತ್ತು. ಅಲ್ಲದೆ ರಾಜ್ಯದ ವಿವಿಧ ಭಾಗಗಳಲ್ಲಿ ಕಂಬಳದ ಉಳಿವಿಗೆ ಆಗ್ರಹಿಸಿ ಭಾರೀ ಪ್ರತಿಭಟನೆಗಳು ಕೂಡಾ ನಡೆದಿದ್ದವು.

error: Content is protected !!
Scroll to Top