ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ



(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭಗೊಂಡಿದೆ ಎಂದು ತಿಳಿದುಬಂದಿದೆ.






ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಪರಿಣಾಮ ತತ್‌ ಕ್ಷಣದಿಂದಲೇ ಮಂಗಳೂರು- ಬೆಂಗಳೂರು ಎಲ್ಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹಾಗೂ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಇದೀಗ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇದೀಗ 12 ದಿನಗಳ ಬಳಿಕ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top