(ನ್ಯೂಸ್ ಕಡಬ)newskadaba.com ಕಾರವಾರ, ಆ.09. ಕಾಳಿ ಸೇತುವೆಯ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ನಿರ್ಲಕ್ಷ್ಯವೇ ಕಾರಣ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿ ಆರೋಪಿಸಿದೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲಾಡಳಿತದ ಉನ್ನತ ಅಧಿಕಾರಿಯೊಬ್ಬರು ಮಾತನಾಡಿ, ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾರವಾರದ ಎನ್‌ಎಚ್ 66 ರಲ್ಲಿ ಸೇತುವೆ ಕುಸಿಯಲು ಎನ್‌ಎಚ್‌ಎಐನ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ.
2013ರಲ್ಲಿ ಸೇತುವೆಯನ್ನು ಎನ್‌ಎಚ್‌ಎಐ ಅಧೀನಕ್ಕೆ ವರ್ಗಾಯಿಸಲಾಗಿದ್ದು, ಹಳೆಯ ಸೇತುವೆಯನ್ನು ನಿರ್ವಹಿಸಲು ಪ್ರಾಧಿಕಾರವು ಒಪ್ಪಂದ ಮಾಡಿಕೊಂಡಿತ್ತು. ನಿರ್ವಹಣೆಯ ನಂತರ ಅವರು ಫಿಟ್ನೆಸ್ ಪ್ರಮಾಣಪತ್ರವನ್ನು ನೀಡಬೇಕಿತ್ತು. ಆದರೆ, ಯಾವುದೇ ನಿರ್ವಹಣಾ ಕಾರ್ಯಗಳನ್ನು ನಡೆಸದೆ ಪ್ರಮಾಣಪತ್ರವನ್ನು ನೀಡಿದ್ದಾರೆಂದು ತಿಳಿಸಿದ್ದಾರೆ.