ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ       



(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ.





ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟವು ನೋಟಿಸ್‌ ವಾಪಸ್‌ ಪಡೆಯಲು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿತು. ಅಲ್ಲದೆ, ಅರ್ಜಿಯನ್ನು ತಿರಸ್ಕರಿಸುವಂತೆಯೂ ಆಗ್ರಹಿಸಿತ್ತು  ಎನ್ನಲಾಗಿದೆ.






 

 

error: Content is protected !!
Scroll to Top