ಅಬಕಾರಿ ನೀತಿ ಹಗರಣ         ಸುಪ್ರೀಂಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ದೆಹಲಿ, ಆ.09. ಅಬಕಾರಿ ನೀತಿ ಹಗರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದ್ದು, ಇದೀಗ ಮಹತ್ವದ ತೀರ್ಪು ಪ್ರಕಟವಾಗಿದೆ. ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಮಂಜೂರಾಗುವ ಮೂಲಕ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಅವರು ಜೈಲುವಾಸದಿಂದ ಮುಕ್ತರಾಗಿದ್ದಾರೆ ಎನ್ನಲಾಗಿದೆ.

Also Read  ಉದ್ಯೋಗಿಗಳ ವಜಾದ ಬಳಿಕ ಅಧ್ಯಕ್ಷನನ್ನೇ ತೆಗೆದು ಹಾಕಿದ ಝೂಮ್…!

 

error: Content is protected !!
Scroll to Top