ದಕ್ಷಿಣ ಕನ್ನಡಜಿಲ್ಲೆಯ ವಸಂತ ಅಮೀನ್‌ ಸೇರಿ 93 ಮಂದಿಗೆ ನಾಟಕ‌ ಅಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ನಾಟಕ ಅಕಾಡೆಮಿಯು ಮೂರು ವರ್ಷಗಳ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಟಿ ಉಮಾಶ್ರೀ , ನಾಟಕಕಾರರಾದ ಎಚ್.ಎಸ್. ಶಿವಪ್ರಕಾಶ್ ಹಾಗೂ ರಂಗಕರ್ಮಿ ಕೋಟಿಗಾನಹಳ್ಳಿ ರಾಮಯ್ಯ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ (ಗೌರವ ಪ್ರಶಸ್ತಿ) ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಸಂತ್‌ ಅಮೀನ್‌ ಗೂ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಅವರು ಸುದ್ದಿಗೋಷ್ಠಿಯಲ್ಲಿ 93 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದರು.‘ಜೀವಮಾನ ಸಾಧನೆ ಪ್ರಶಸ್ತಿ’ಯು ತಲಾ 50 ಸಾವಿರ ನಗದು ಹಾಗೂ ನಟರಾಜ ವಿಗ್ರಹ ಒಳಗೊಂಡಿದೆ. ವಾರ್ಷಿಕ ಪ್ರಶಸ್ತಿಗೆ 75 ಮಂದಿ ಭಾಜನರಾಗಿದ್ದು, ತಲಾ 25 ಸಾವಿರ ನಗದು ಹಾಗೂ ನಟರಾಜ ವಿಗ್ರಹ ಒಳಗೊಂಡಿವೆ.

Also Read  ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಗಿರಿಜನ ರೇಷ್ಮೆ ವಿಸ್ತರಣಾ ಕೇಂದ್ರ ಪುತ್ತೂರು➤ ಹಳೆಯ ಅನುಪಯುಕ್ತ ವಸ್ತುಗಳಬಹಿರಂಗ ಹರಾಜು

error: Content is protected !!
Scroll to Top