ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು      



(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದ್ದು, ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.





ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆ.09) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮುರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ ಎಂದು ವರದಿ ತಿಳಿಸಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.






error: Content is protected !!
Scroll to Top