ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಅಮನ್ ಸೆಹ್ರಾವತ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಹೊಸ ಇತಿಹಾಸ ನಿರ್ಮಿಸಿದ್ದು. 21ನೇ ವಯಸ್ಸಿವರಾದ ಅಮನ್ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ ಎನ್ನಲಾಗಿದೆ.


57 ಕೆಜಿ ಪುರುಷರ ಫ್ರಿ ಸ್ಟೈಲ್‌ ವಿಭಾಗದಲ್ಲಿ ಅಮನ್‌ ನಿಗದಿತ ಸಮಯದಲ್ಲಿ 13-5 ಅಂಕಗಳಿಂದ ಪೋರ್ಟೊ ರಿಕೊದ ಡೇರಿಯನ್ ಡೋಯಿ ಕ್ರೂಜ್ ಅವರನ್ನು ಮಣಿಸಿದರು. ಈ ಮೂಲಕ ಭಾರತ ಪ್ಯಾರಿಸ್‌ ಒಲಿಂಪಿಕ್ಸ್ ನಲ್ಲಿ ಆರನೇ ಪದಕವನ್ನು ತನ್ನದಾಗಿಸಿಕೊಂಡಿದೆ. ಅಮನ್‌ ಈ ಬಾರಿಯ ಒಲಿಂಪಿಕ್ಸ್‌ ಗೆ ಅರ್ಹತೆ ಪಡೆದಿದ್ದ ಏಕೈಕ ಪುರುಷ ಕುಸ್ತಿ ಪಟು ಆಗಿದ್ದರು.

Scroll to Top