(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ನಿರ್ಧರಿಸಿದ್ದು, ಈ ನಡುವಲ್ಲೇ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಕ್ಕೆ ಬರುವುದಕ್ಕೂ ಮುನ್ನ 2023 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದಗಳನ್ನು ಯಾವುದೇ ವಿಳಂಬ ನೀತಿ ಅನುಸರಿಸದೆ ಭರ್ತಿ ಮಾಡುತ್ತೇವೆಂದು ಭರವಸೆ ನೀಡಿದ್ದರು.
ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ವಾರ್ಷಿಕ 20,000 ಕೋಟಿ ರೂ. ಬೇಕಾಗುತ್ತದೆ. ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುತ್ತೇವೆಂದು ಹೇಳಿದ್ದರು.