ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಬಗ್ಗೆ ಮೌನ ವಹಿಸಿರುವ ಪಕ್ಷದ ದಲಿತ ಶಾಸಕರ ಮೇಲೆ ಅಸಮಾಧಾನಗೊಂಡು ದಲಿತ ವಿಚಾರವಾದಿಗಳ ಒಂದು ಭಾಗ ದೂರ ಉಳಿದಿತ್ತು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ ಹೆಚ್ಚು ಗೋಚರಿಸುವ ಸಾಧ್ಯತೆ ಇದೆ. ಇದು ಕೇವಲ ಆರಂಭವಾಗಿದೆ ಮತ್ತು ಎಸ್‌ಸಿ/ಎಸ್‌ಟಿ ಗಳಿಗೆ ಮೀಸಲಾದ ಅನುದಾನವನ್ನು ಬೇರೆಡೆಗೆ ನೀಡಿರುವ ವಿಚಾರ ಕುರಿತು ಮಾತನಾಡದಿದ್ದಕ್ಕಾಗಿ ನಾವು ಶಾಸಕರನ್ನು ಘೇರಾವ್ ಹಾಕಲಿದ್ದೇವೆ. ಅವರ ಜನಾಂದೋಲನದಲ್ಲಿ ಪಾಲ್ಗೊಳ್ಳಲು ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಡಿಎಸ್‌ಎಸ್ ಮುಖಂಡ ಮಾವಳ್ಳಿ ಶಂಕರ್ ನ್ಯೂ ಇಂಡಿಯನ್ ಎಕ್ಸ್  ಪ್ರೆಸ್ ಪ್ರತಿನಿಧಿಗೆ ತಿಳಿಸಿದರು.

Also Read  ಮಂಗಳೂರು: 'ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ನಿರ್ಬಂಧವಿದೆಯೇ' ?    ➤ ಡಿಸಿ ಮಾಹಿತಿ

error: Content is protected !!
Scroll to Top