ಮುಂದಿನ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ► ಕುಕ್ಕೇ ಸುಬ್ರಹ್ಮಣ್ಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘೋಷ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.20. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಮುಕ್ತ ಭಾರತದ ಕನಸು ನನಸಾಗಲಿದೆ ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್ ಶಾ ಅವರು ಭವಿಷ್ಯ ನುಡಿದಿದ್ದಾರೆ.

ವಿಧಾನಸಭಾ ಚುನಾವಣೆಗೆ ಬಿಜೆಪಿಯಲ್ಲಿ ಚೈತನ್ಯ ತುಂಬಲು ದಕ್ಷಿಣ ಭಾರತದ ಪ್ರಮುಖ ದೇವಸ್ಥಾನ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸ್ವಾಮೀಜಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭ ಸ್ವಾಮೀಜಿಯವರು ಅಮಿತ್ ಶಾ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ನವ ಕರ್ನಾಟಕ ನಿರ್ಮಾಣಕ್ಕಾಗಿ ‘ನವಶಕ್ತಿ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ ಮೊದಲಾದವರು ಉಪಸ್ಥಿತರಿದ್ದರು.

Also Read  ಕುಂತೂರು: ರಸ್ತೆ ಅಪಘಾತ ➤ ಮರ್ಧಾಳ ಪಂಚಾಯತ್ ಪಿಡಿಓ ಗೆ ಗಾಯ

error: Content is protected !!
Scroll to Top