ಹಿಂದೂ ಧರ್ಮದ ಬಗ್ಗೆ ಅವಹೇಳನ                 ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ.

ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್​ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

Also Read  ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ

 

error: Content is protected !!
Scroll to Top