ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ    

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ.

ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ಮಿತಾ ಹಾಗೂ ಅಶ್ವಿನಿ, ಇತರ ಪ್ತಯಾಣಿಕರಾದ ಶಿವರಾಂ, ವಿದ್ಯಾ, ಸತೀಶ್, ದೀಪ ಹಾಗೂ ಸುಕ್ರ ಎಂಬುವರು ಸಣ್ಣ ಪುಟ್ಟ ಗಾಯಗಳಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ

 

error: Content is protected !!
Scroll to Top