ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆ ► 34 ಸ್ಥಾನಗಳಲ್ಲಿ 27 ರಲ್ಲಿ ಕಾಂಗ್ರೆಸ್ ಭರ್ಜರಿ ಜಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.20. ತಾಲೂಕಿನ ಪುದು ಗ್ರಾಮ ಪಂಚಾಯತ್‌ಗೆ ರವಿವಾರದಂದು ನಡೆದ ಚುನಾವಣೆಯ ಮತ ಎಣಿಕೆಯು ಪೂರ್ಣಗೊಂಡಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವುದರೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

34 ಸ್ಥಾನಗಳ ಪೈಕಿ 27 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸಿದ್ದು, ಬಿಜೆಪಿ ಆರು ಸ್ಥಾನಗಳಲ್ಲಿ ಜಯಿಸಿದ್ದರೆ, ಎಸ್‌ಡಿಪಿಐ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಪುದು ಗ್ರಾ.ಪಂ.ನ 10 ವಾರ್ಡ್‌ಗಳ 34 ಸ್ಥಾನಗಳಿಗೆ ರವಿವಾರ ಚುನಾವಣೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವೆ ನೇರ ಹಣಾಹಣಿ ಎಂದು ತೀವ್ರ ಪ್ರಚಾರ ನಡೆಸಿದ್ದರೂ ಕೊನೆಗೆ ಎಸ್‌ಡಿಪಿಐ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

Also Read  ಸೋಮೇಶ್ವರ ಬೀಚ್ ನಲ್ಲಿ ಕಸ ಎಸೆದ ಯುವತಿಯರು ➤ ದಂಡ ವಿಧಿಸಿ ಎಚ್ಚರಿಕೆ ನೀಡಿದ ಪುರಸಭೆ

error: Content is protected !!
Scroll to Top