ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12. ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆಜಿ ಸರ್ಕಲ್ ಬಳಿ ನಡೆಯಿತು.

ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು. ತುರ್ತು ಕರೆಗೆ ತಕ್ಷಣವೇ ಸ್ಪಂದಿಸಿ ಸಿಂಗಲ್ ಡೋನರ್ ಪ್ಲೇಟ್ಲೆಟ್ ರಕ್ತವನ್ನು ದಾನ ಮಾಡಿದ ಸಾಮಾಜಿಕ ಕಾರ್ಯಕರ್ತ ರಹೀಮ್ ಚಿಕ್ಕಪೇಟೆ ಇವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಉದ್ಯಮಿ ಶಬೀರ್ ಬ್ರಿಗೇಡ್, ಬಿಸಿಸಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ನ್ಯಾಯವಾದಿಗಳಾದ ಅಥಾವುಲ್ಲಾ ಪುಂಜಾಲಕಟ್ಟೆ, ಬಿಸಿಸಿಯ ವೈದ್ಯಕೀಯ ಉಸ್ತುವಾರಿ ಬದ್ರುದ್ದೀನ್, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಗೌರವಾಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಅಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಬಿಡಿಎಂ ಉಪಾಧ್ಯಕ್ಷರಾದ ಅಶ್ರಫ್ ಸಿ ಎಂ, ಪ್ರಧಾನ ಕಾರ್ಯದರ್ಶಿಗಳಾದ ಶಾಹುಲ್ ಹಮೀದ್ ಕಾಶೀಪಟ್ನ ಹಾಗೂ ಬ್ಯಾರೀಸ್ ಸೆಂಟ್ರಲ್ ಕಮಿಟಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Also Read  ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ

 

error: Content is protected !!
Scroll to Top