ಉಡುಪಿ: ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳ ಬಳಕೆ ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 13.  ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ ಧ್ವಜಗಳನ್ನು ಬಳಸಬಾರದು. ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಎಂದು ವರದಿ ತಿಳಿಸಿದೆ.

Also Read  ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾದ ಬಿಸಿಲಿನ ತಾಪ

error: Content is protected !!
Scroll to Top