ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಆರು ರಂಗಾಯಣಗಳ ನಿರ್ದೇಶಕರು ಹಾಗೂ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಮತ್ತು ಕಾರ್ಕಳದ ಯಕ್ಷ ರಂಗಾಯಣ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

Also Read  ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ

 

error: Content is protected !!
Scroll to Top