ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ..!        ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ..!



(ನ್ಯೂಸ್ ಕಡಬ) newskadaba.com ನವದೆಹಲಿ, ಆ. 13.  ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಕುರಿತ ಹಿಂಡೆನ್ ಬರ್ಗ್ ರಿಸರ್ಚ್ ವರದಿಯನ್ನು ಬೆಂಬಲಿಸಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಅವರನ್ನು ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ಬಣ್ಣಿಸಿದ್ದು, ರಾಷ್ಟ್ರ ಮತ್ತು ಅದರ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.





ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕಂಗನಾ, ಅವರು ಪ್ರಧಾನಿ ಕುರ್ಚಿ ಪಡೆಯಲು ಸಾಧ್ಯವಾಗದ ಕಾರಣ, ದುರುದ್ದೇಶ ಪೂರಿತ ವರದಿ ಕುರಿತು ಸರ್ಕಾರವನ್ನು ಖಂಡಿಸಿದ್ದಾರೆ. ಪ್ರಧಾನಿಯಾಗದಿದ್ದರೆ ಇಡೀ ದೇಶವನ್ನು ನಾಶಗೊಳಿಸುವುದು ಅವರ ಅಜೆಂಡಾ ಆಗಿದೆ ಎಂದು ಟೀಕಿಸಿದ್ದಾರೆ.






 

error: Content is protected !!
Scroll to Top