ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಸಿಎಂ ಸಿದ್ದರಾಮಯ್ಯ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13.  ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ ಗ್ರಂಥಾಲಯ ಮೇಲ್ವಿಚಾರಕರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಹೊಸ ಗ್ರಾಮ ಗ್ರಂಥಾಲಯ– ‘ಅರಿವು ಕೇಂದ್ರ’ಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಿ ಮುಖ್ಯಮಂತ್ರಿಗಳು ಮಾತನಾಡಿದರು.

ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6,599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದು, ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದರು.

Also Read  ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಬಲಿ!

 

error: Content is protected !!
Scroll to Top