ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. 2023-24ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯು ಆಗಸ್ಟ್ 17 ರಿಂದ 19ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

2024ರ ಮಾರ್ಚ್ 19 ಮತ್ತು 20ರಂದು ಮಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಖಾಯಂ ಸರ್ಕಾರಿ ನೌಕರ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುವ ಕ್ರೀಡಾಪಟುಗಳು ಆ. 17 ರಂದು ಬೆಳಿಗ್ಗೆ 8 ಗಂಟೆಯ ಒಳಗಾಗಿ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group