ಪುತ್ತೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ (Single Use Plastic-SUP) ಉತ್ಪನ್ನ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆಯಿಂದ ಆದೇಶ ಹೊರಡಿಸಲಾಗಿರುತ್ತದೆ.

Also Read  ಕಡಬ: ತುಂಬಿ‌ ಹರಿಯುತ್ತಿರುವ ನದಿಗೆ ಸೇತುವೆಯ ಮೇಲಿನಿಂದ ಹಾರಿದ ಯುವಕ..⁉️ ಯುವಕನ ರಕ್ಷಣಾ ಕಾರ್ಯ ಆರಂಭ

ನಗರ ವ್ಯಾಪ್ತಿಯ ಎಲ್ಲಾ ನಾಗರೀಕರು ಮತ್ತು ವರ್ತಕರಲ್ಲಿ ಆಗಸ್ಟ್ 15 ರಂದು ಆಚರಿಸಲ್ಪಡುವ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್‍ನಿಂದ ತಯಾರಿಸಲಾದ ರಾಷ್ಟ್ರಧ್ವಜ ಮತ್ತು ಇತರೆ ಸಂಬಂಧಪಟ್ಟ ವಸ್ತುಗಳ ಬಳಕೆ ಮತ್ತು ಮಾರಾಟ ಮಾಡದಂತೆ ಕೋರಲಾಗಿದೆ. ನಿಯಮ ಉಲ್ಲಂಘಿಸಿ ಯಾವುದೇ ಉದ್ದಿಮೆ ಕಟ್ಟಡದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಲಾದ ರಾಷ್ಟ ಧ್ವಜಗಳನ್ನು ತಯಾರಿಸುವುದು, ದಾಸ್ತಾನು ಮಾಡುವುದು ಮತ್ತು ಮಾರಾಟ ಮಾಡುವುದನ್ನು ಕಂಡುಬಂದಲ್ಲಿ ವಶಪಡಿಸಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top