ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 14. ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿಯನ್ನು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದು, ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯದ ಪಡಿತರ ಫಲಾನುಭವಿಗಳಿಗೆ ವಿತರಿಸಲು ಬೇಕಾದ ಅಕ್ಕಿಯ ಪ್ರಮಾಣದ ಕುರಿತು ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅಗತ್ಯವಿರುವ ಅಕ್ಕಿಯನ್ನು ನೀಡಲು ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ.

ಮಂಗಳವಾರದಂದು ಕೇಂದ್ರ ಸಚಿವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ಈಗಾಗಲೇ ಕೇಂದ್ರ ಸರ್ಕಾರ ರಾಜ್ಯದ 4 ಕೋಟಿ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ವಿತರಿಸುತ್ತಿದೆ. ಉಳಿದ ಹೆಚ್ಚುವರಿ 13 ಲಕ್ಷ ಬಿಪಿಎಲ್ ಕಾರ್ಡ್ ನ 40 ರಿಂದ 50 ಲಕ್ಷ ಮಂದಿಗೆ ರಾಜ್ಯವೇ ಅಕ್ಕಿ ವಿತರಿಸುತ್ತಿದ್ದು, ಇದಕ್ಕಾಗಿ ಕೆಜಿ ಅಕ್ಕಿಗೆ 34 ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group