(ನ್ಯೂಸ್ ಕಡಬ) newskadaba ಉಳ್ಳಾಲ. ಆ. 14. ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಚಾಲಕನೋರ್ವ ಮೃತಪಟ್ಟು ರಸ್ತೆಗೆಸೆಯಲ್ಪಟ್ಟಿದ್ದು, ಪರಿಣಾಮ ಚಾಲಕನಿಲ್ಲದೇ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿಂಗ್ ನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ಮೂವರು ಅಪಾಯದಿಂದ ಪಾರಾದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದೆ. ಇವರು ಧರ್ಮನಗರದಿಂದ ತನ್ನ ರಿಕ್ಷಾದಲ್ಲಿ ಇಬ್ಬರು ಮಹಿಳೆಯರನ್ನು ಕೂರಿಸಿಕೊಂಡು ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ಚಾಲಕನಿಲ್ಲದೇ ಮುಂದಕ್ಕೆ ಚಲಿಸಿದ ರಿಕ್ಷಾ ಅಲ್ಲೇ ಪಾರ್ಕಿಂಗ್ ನಲ್ಲಿ ನಿಂತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳಿಂದ ತಿಳಿದುಬಂದಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾಋಇ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









