ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿ ಹೊರಡಿಸಿದ್ದಾರೆ.

ಖುಷ್ಬೂ ಜಿ.ಚೌಧರಿ ಅವರನ್ನು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಹಾಗೂ ಡಾ.ವೆಂಕಟೇಶ್ ಎಂ.ವಿ. ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿದೇಶಕ ಶೆಟ್ಟೆಣ್ಣನವರ್ ಎಸ್.ಬಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ
ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ ಬಿ.ಸಿ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

Also Read  ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ

ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್. ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯಕಾರಿ ನಿರ್ದೇಶಕಿ ಲತಾ ಕುಮಾರಿ ಕೆ.ಎಸ್. ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಅಧಿಕಾರಿ ಕಾಂತರಾಜು ಪಿ.ಎಸ್. ಅವರನ್ನು ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

error: Content is protected !!
Scroll to Top