ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ- ಅರ್ಜಿ ಆಹ್ವಾನ – News Kadaba

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ   ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ. ವಿದ್ಯಾರ್ಥಿಗಳು https://shp.karnataka.gov.in/bcwd ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು 2024ರ ಸೆಪ್ಟೆಂಬರ್ 04 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ವಿಳಾಸ: bcwdhelpline@gmail.com ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top