‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. 78ನೇ ಸ್ವಾತಂತ್ರ್ಯ ದಿನಾಚರಣೆಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು.

ರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದು, ಕಾಂಗ್ರೆಸ್‌ ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯ ಎಂದು ಹೇಳಿದರು.

Also Read  ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..!

 

error: Content is protected !!
Scroll to Top