50 ಕೋಟಿ ರೂ. ಮಾನನಷ್ಟ ಮೊಕದಮ್ಮೆ..!         ವಿಧಾನ ಪರಿಷತ್‌ ಸದಸ್ಯ- ಹೆಚ್.ವಿಶ್ವನಾಥ್‌ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನನ್ನ ವಿರುದ್ಧ 50 ಕೋಟಿ ರೂ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದಾರೆ. ಈ ಕುರಿತು ನನಗೆ ನೋಟಿಸ್ ಬಂದಿದೆ. ನಾನೂ ಲಾಯರ್ ಆಗಿದ್ದವನು. ಇದಕ್ಕೆಲ್ಲ ಉತ್ತರ ನೀಡುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಹೇಳಿದರು.

ಮುಡಾ ಹಗರಣ ತನಿಖೆ ಮಾಡುತ್ತೇವೆ ಮತ್ತು ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆದರೂ ಜನ ಸಾಮಾನ್ಯರಿಗೆ ಒಂದು ನಿವೇಶನ ಹಂಚಿಕೆ ಮಾಡಲು ಆಗಲಿಲ್ಲ. ಮುಡಾದಲ್ಲಿ 86 ಸಾವಿರ ಜನ ಅರ್ಜಿ ಹಾಕಿದ್ದಾರೆ. ಜನರಿಗೆ ಸೈಟ್‌ ಕೊಡುವುದನ್ನು ಬಿಟ್ಟು, ಸಿದ್ದರಾಮಯ್ಯ ತನ್ನ ಹೆಂಡತಿ ಹೆಸರಿನಲ್ಲಿ ಸೈಟ್‌ ಪಡೆದಿದ್ದಾರೆ. ಹೀಗೆ ಪಡೆದ ಬದಲಿ ನಿವೇಶನಗಳನ್ನು ಮೊದಲು ವಾಪಸ್‌ ನೀಡಿ ಎಂದು ಒತ್ತಾಯಿಸಿದರು ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಲಾಕ್‌ಡೌನ್ ನಡುವೆಯೂ ಕೃಷಿಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ..?

 

error: Content is protected !!
Scroll to Top