ಮಂಗಳೂರು: ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.21. ಬಿ.ಜೆ.ಪಿ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದ ಸಮಾವೇಶವನ್ನು ಮುಗಿಸಿ ಹಿಂತಿರುಗುತ್ತಿದ್ದ ಪಕ್ಷದ ಕಾರ್ಯಕರ್ತರ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ಬೆಂಗ್ರೆಯಲ್ಲಿ ನಡೆದಿದೆ.

ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬಿ.ಜೆ.ಪಿ. ಕಾರ್ಯಕರ್ತರ ಬಸ್ ಬೆಂಗರೆ ತಲುಪಿದಾಗ ಅಲ್ಲಿದ್ದ ದುಷ್ಕರ್ಮಿಗಳ ತಂಡ ಬಸ್ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Scroll to Top