(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15. ರಾಜ್ಯ ಸರ್ಕಾರವು ತನ್ನ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್‌ನಲ್ಲಿನ (PNB) ಎಲ್ಲಾ ಠೇವಣಿ ಮತ್ತು ಹೂಡಿಕೆಗಳನ್ನು ಹಿಂಪಡೆಯಲು ಮತ್ತು ಬ್ಯಾಂಕ್ ಜೊತೆ ಯಾವುದೇ ವ್ಯವಹಾರವನ್ನು ನಿಲ್ಲಿಸುವಂತೆ ಆದೇಶಿಸಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು 2011ರಲ್ಲಿ ಚೆಕ್ ಮೂಲಕ 25 ಕೋಟಿ ರೂಪಾಯಿ ಪಾವತಿಸಿತ್ತು. ಇದರಲ್ಲಿ 13 ಕೋಟಿ ರೂಪಾಯಿ ನಗದೀಕರಣವಾಗಿತ್ತು. ಆದರೆ ಬ್ಯಾಂಕ್ ಅಧಿಕಾರಿಗಳಿಂದ ನಡೆದಿದೆ ಎನ್ನಲಾದ ವಂಚನೆ ಪ್ರಕರಣದಿಂದಾಗಿ 12 ಕೋಟಿ ರೂಪಾಯಿ ಇನ್ನು ಮರುಪಾವತಿಯಾಗಿಲ್ಲ. ಈ ಪ್ರಕರಣವು ನ್ಯಾಯಾಲಯಗಳಲ್ಲಿ 10 ವರ್ಷಗಳಿಂದಲೂ ವಿಚಾರಣೆ ಹಂತದಲ್ಲಿದೆ.